alex Certify ಅಕ್ರಮ ಸಂಬಂಧ ಬೆಳೆಸಿದ ಮಹಿಳೆಯಿಂದ ಘೋರ ಕೃತ್ಯ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ ಸಂಬಂಧ ಬೆಳೆಸಿದ ಮಹಿಳೆಯಿಂದ ಘೋರ ಕೃತ್ಯ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ

ಬೆಂಗಳೂರು: ತಲಘಟ್ಟಪುರದಲ್ಲಿ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿದ ಪತ್ನಿ ಸೇರಿ ಐವರು ಆರೋಪಿಗಳನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.

ಪತ್ನಿ ರಂಜಿತಾ, ಪ್ರಿಯಕರ ಗಣೇಶ, ಶರತ್, ಶಿವಾನಂದ, ದೀಪು ಬಂಧಿತ ಆರೋಪಿಗಳು. ಆರೋಪಿ ಗಣೇಶ ಮತ್ತು ರಂಜಿತಾ ನಡುವೆ ಅಕ್ರಮ ಸಂಬಂಧ ಬೆಳೆದಿತ್ತು. ಅಕ್ರಮ ಸಂಬಂಧಕ್ಕೆ ಪತಿ ಅರುಣ್ ಕುಮಾರ್ ಅಡ್ಡಿಯಾಗಿದ್ದ ಹಿನ್ನೆಲೆಯಲ್ಲಿ ಪ್ರಿಯಕರನ ಜೊತೆ ಸೇರಿ ಪತಿ ಅರುಣ್ ಕುಮಾರ್ ನನ್ನು ಕೊಲೆ ಮಾಡಿಸಿದ್ದಾಳೆ ಎನ್ನುವುದು ತನಿಖೆಯಲ್ಲಿ ಗೊತ್ತಾಗಿದೆ.

ಜೂ. 28ರಂದು ಅರುಣ್ ಕುಮಾರ್ ನನ್ನು ಕೊಲೆ ಮಾಡಿದ್ದು, ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...