ನವದೆಹಲಿ: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಚುನಾವಣಾಧಿಕಾರಿ ಮತಪತ್ರಗಳನ್ನು ಅಸಿಂಧುಗೊಳಿಸಿರುವುದನ್ನು ಪ್ರಜಾಪ್ರಭುತ್ವದ ಕೊಲೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮೇಯರ್ ಚುನಾವಣೆಯಲ್ಲಿ ಮತಯಂತ್ರಗಳನ್ನು ವಿರೂಪಗೊಳಿಸಿರುವುದು ಸ್ಪಷ್ಟವಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
ಚಂಡೀಗಢದಲ್ಲಿ ಹೊಸ ಮೇಯರ್ ಚುನಾವಣೆಗೆ ಪಕ್ಷಕ್ಕೆ ಯಾವುದೇ ಮಧ್ಯಂತರ ಪರಿಹಾರವನ್ನು ನೀಡಲು ನಿರಾಕರಿಸಿದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಎಎಪಿ ಕೌನ್ಸಿಲರ್ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
ಇದು ಅಧಿಕಾರಿ ಚುನಾವಣೆ ನಡೆಸುವ ವಿಧಾನವೇ? ಇದು ಪ್ರಜಾಪ್ರಭುತ್ವದ ಅಣಕ. ಇದು ಪ್ರಜಾಪ್ರಭುತ್ವದ ಕೊಲೆ. ನಾವು ಗಾಬರಿಗೊಂಡಿದ್ದೇವೆ. ಈ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇದು ಚುನಾವಣಾಧಿಕಾರಿಯ ವರ್ತನೆಯೇ? ಸಿಜೆಐ ಡಿವೈ ಚಂದ್ರಚೂಡ್ ಹೇಳಿದ್ದಾರೆ.
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಮೂಲಕ ಮತಪತ್ರಗಳು, ವಿಡಿಯೋಗ್ರಫಿ ಮತ್ತು ಇತರ ವಸ್ತುಗಳನ್ನು ಒಳಗೊಂಡಂತೆ ಚುನಾವಣಾ ಪ್ರಕ್ರಿಯೆಯ ಸಂಪೂರ್ಣ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಚಂಡೀಗಢ ಕಾರ್ಪೊರೇಷನ್‌ನ ಮುಂದಿನ ಸಭೆಯನ್ನು ಈ ವಿಷಯದ ಮುಂದಿನ ವಿಚಾರಣೆಯವರೆಗೆ ಮುಂದೂಡಲಾಗುವುದು ಎಂದು ನ್ಯಾಯಾಲಯವು ಸೂಚಿಸಿದೆ.