ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಮಹಾದೇವನಕಟ್ಟೆ ಗ್ರಾಮದ ಬಳಿ ಮೆಕ್ಕೆಜೋಳದ ಹೊಲದಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.
43 ವರ್ಷದ ಮಹಿಳೆಯನ್ನು ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಲ್ಲಿಕಾರ್ಜುನ(35) ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮಹಿಳೆ ಈ ಹಿಂದೆ ಓರ್ವನನ್ನು ಪ್ರೀತಿಸಿ ಓಡಿ ಹೋಗಿದ್ದು, ವಾಪಸ್ ಕರೆ ತಂದ ಮನೆಯವರು ಬೇರೆ ವ್ಯಕ್ತಿಯೊಂದಿಗೆ ಮದುವೆ ಮಾಡಿದ್ದರು. ಅವರಿಗೆ ಪುತ್ರಿ ಜನಿಸಿದ್ದು ಪಿಯುಸಿವರೆಗೂ ಓದಿಸಿ ಮದುವೆ ಮಾಡಲಾಗಿದೆ. ಗಂಡನನ್ನು ಬಿಟ್ಟು ಮಲ್ಲಿಕಾರ್ಜುನನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ ಮಹಿಳೆ ಏಕಾಂಗಿಯಾಗಿ ವಾಸವಾಗಿದ್ದಳು. ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಮಹಿಳೆ ಜಮೀನು ಮಾರಾಟ ಮಾಡಿದ್ದ ಎರಡು ಲಕ್ಷ ರೂಪಾಯಿ ಪಡೆದುಕೊಳ್ಳಲು ಮಲ್ಲಿಕಾರ್ಜುನನೇ ಜಮೀನಿಗೆ ಕರೆಸಿಕೊಂಡು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಾಪತ್ತೆಯಾಗಿರುವ ಮಲ್ಲಿಕಾರ್ಜುನನ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.