ರಾಯಚೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಉಪನ್ಯಾಸಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ಸಮೀಪ ನಡೆದಿದೆ.
ಪಿಯು ಕಾಲೇಜು ಉಪನ್ಯಾಸಕ ಮಾನಪ್ಪ ಗೋಪಾಳಾಪುರ(59) ಹತ್ಯೆಯಾದವರು ಎಂದು ಹೇಳಲಾಗಿದೆ. ಅವರನ್ನು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ದೇವದುರ್ಗದ ಬಾಲಕಿಯರ ಕಾಲೇಜು ಉಪನ್ಯಾಸಕರಾಗಿದ್ದ ಮಾನಪ್ಪ ಪರೀಕ್ಷಾ ಕಾರ್ಯ ಮುಗಿಸಿಕೊಂಡು ತೆರಳುತ್ತಿದ್ದ ವೇಳೆಯಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾರೆ.
ಮಾನಪ್ಪ ಅವರು ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಐಯಾಳಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.