ಹಾಸನ: ಪ್ರತಿದಿನ ಪತಿ ಕುಡಿದು ಬಂದು ಗಲಾಟೆ ಮಾಡುತ್ತಿದ್ದರಿಂದ ಗಂಡನನ್ನು ಕೊಲೆ ಮಾಡಿದ ಪತ್ನಿ ಸಹಜ ಸಾವು ಎನ್ನುವಂತೆ ಬಿಂಬಿಸಿದ್ದಾಳೆ. ತನಿಖೆ ಕೈಗೊಂಡ ಹೊಳೆನರಸೀಪುರ ಹಳ್ಳಿ ಮೈಸೂರು ಠಾಣೆ ಪೊಲೀಸರು ಮೃತನ ಪತ್ನಿಯನ್ನು ಬಂಧಿಸಿದ್ದಾರೆ.
ಫೆಬ್ರವರಿ 27 ರಂದು ರೇವಣ್ಣ ಎಂಬಾತ ಮದ್ಯಪಾನ ಮಾಡಿ ಮನೆಗೆ ಬಂದು ಪತ್ನಿಯೊಂದಿಗೆ ಜಗಳವಾಡಿದ್ದು, ಈ ವೇಳೆ ಪತಿಯ ಮರ್ಮಾಂಗಕ್ಕೆ ಒದ್ದು ಪತ್ನಿಯೇ ಕೊಲೆ ಮಾಡಿದ್ದಾಳೆ. ಗಂಡ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹೇಳಿದ್ದಾಳೆ.
ಅಕ್ರಮ ಸಂಬಂಧದ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿದ್ದು, ಜಗಳದ ವೇಳೆ ಪತ್ನಿ ರೇವಣ್ಣನನ್ನು ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ರೇವಣ್ಣ ಮತ್ತು ಆತನ ಪತ್ನಿ ಪ್ರೀತಿಸಿ ಮದುವೆಯಾಗಿದ್ದು, ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ರೇವಣ್ಣ ಇದೇ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದ. ಗಂಡ ಬಿಟ್ಟು ಹೋಗಿದ್ದರಿಂದ ಪತ್ನಿ ಮತ್ತೊಬ್ಬನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಾಳೆ.
ನಂತರದಲ್ಲಿ ಮನೆಗೆ ಮರಳಿದ್ದ ರೇವಣ್ಣ ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿ ಜಗಳವಾಡುತ್ತಿದ್ದ. ಜಗಳದ ವೇಳೆ ಪತ್ನಿಯೇ ಮರ್ಮಾಂಗಕ್ಕೆ ಒದ್ದು ಕೊಲೆ. ಹೊಳೆನರಸಿಪುರ ಹಳ್ಳಿ ಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.