alex Certify ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೊಬ್ಬ ಅರೆಸ್ಟ್, ಬಂಧಿತ ಆರೋಪಿ ಯಾರು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೊಬ್ಬ ಅರೆಸ್ಟ್, ಬಂಧಿತ ಆರೋಪಿ ಯಾರು ಗೊತ್ತಾ…?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಸುಳ್ಯ ಪಟ್ಟಣದ ಜಟ್ಟಿಪಳ್ಳ ನಿವಾಸಿ ಅಬ್ಬಾಸ್ ಅವರ ಪುತ್ರ ಸಿ.ಎ. ಅಬ್ದುಲ್ ಕಬೀರ್(33) ಬಂಧಿತ ಆರೋಪಿ ಎಂದು ಹೇಳಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಅಬ್ದುಲ್ ಕಬೀರ್ ನನ್ನು ಬಂಧಿಸಲಾಗಿದೆ. ಈತ ಪ್ರಮುಖ ಆರೋಪಿಗಳಿಗೆ ನೆರವು ಕೂಡ ನೀಡಿದ್ದ ಎನ್ನಲಾಗಿದೆ. ಪ್ರಕರಣದಲ್ಲಿ ಎಲ್ಲಾ ಆರೋಪಿಗಳನ್ನು ಗುರುತಿಸಲಾಗಿದ್ದು, ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...