alex Certify ಆಸ್ತಿಗಾಗಿ ಅಣ್ಣನಿಂದಲೇ ಆಘಾತಕಾರಿ ಕೃತ್ಯ: ತಮ್ಮನ ಜೀವ ತೆಗೆದು ಪರಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿಗಾಗಿ ಅಣ್ಣನಿಂದಲೇ ಆಘಾತಕಾರಿ ಕೃತ್ಯ: ತಮ್ಮನ ಜೀವ ತೆಗೆದು ಪರಾರಿ

ಬೆಂಗಳೂರು: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳದ ವೇಳೆ ಅಣ್ಣನೇ ತಮ್ಮನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

31 ವರ್ಷದ ವಿನಯ್ ಕುಮಾರ್ ಕೊಲೆಯಾದ ಯುವಕ. ಈತನ ಅಣ್ಣ ಆರೋಪಿ ಸತೀಶ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾವೇರಿಪುರ ನಿವಾಸಿ ವಿನಯ್ ಹಾಗೂ ಸತೀಶ್ ನಡುವೆ ಆಸ್ತಿ ವಿಚಾರಕ್ಕೆ ಜಗಳವಾಗಿದ್ದು, ಜಗಳದ ವೇಳೆ ತಮ್ಮನಿಗೆ ಚಾಕುವಿನಿಂದ ಇರಿದು ನಾಲ್ಕನೇ ಮಹಡಿಯಿಂದ ಕೆಳಗೆ ತಳ್ಳಿ ಕೊಲೆ ಮಾಡಲಾಗಿದೆ.

ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವಿನಯ್ ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪರಾರಿಯಾಗಿದ್ದ ಸತೀಶ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿನಯ್ ಗೆ ಇತ್ತೀಚೆಗೆ ಮದುವೆ ನಿಶ್ಚಯವಾಗಿತ್ತು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...