alex Certify ಶಾಸಕರ ಅಭಿನಂದನಾ ಸಮಾರಂಭದಲ್ಲೇ ಚಾಕು ಇರಿದು ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಸಕರ ಅಭಿನಂದನಾ ಸಮಾರಂಭದಲ್ಲೇ ಚಾಕು ಇರಿದು ಹತ್ಯೆ

ಚಿಕ್ಕಮಗಳೂರು: ಶಾಸಕರ ಅಭಿನಂದನಾ ಸಮಾರಂಭದಲ್ಲೇ ಚಾಕುವಿನಿಂದ ಇರಿದು ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಘಟನೆ ನಡೆದಿದೆ. ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರಕ್ಕೆ ಗಲಾಟೆ ನಡೆದು ಚಾಕುವಿನಿಂದ ಇರಿಯಲಾಗಿದೆ. ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಅಭಿನಂದನಾ ಸಮಾರಂಭದಲ್ಲಿ 28 ವರ್ಷದ ವರುಣ್  ನನ್ನು ಹತ್ಯೆ ಮಾಡಲಾಗಿದೆ. ಗಲಾಟೆ ವೇಳೆಯಲ್ಲಿ ಮಂಜು ಹಾಗೂ ಸಂಜು ಎಂಬುವರಿಗೆ ಗಾಯಗಳಾಗಿವೆ.

ಅಭಿಮಾನಿಗಳು ಶಾಸಕ ಶ್ರೀನಿವಾಸ್ ಅವರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಿದ್ದರು. ಈ ವೇಳೆ ಗಲಾಟೆ ನಡೆದು ವರುಣ್ ನನ್ನು ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಎಸ್.ಪಿ. ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...