
ವಿಜಯಪುರ: ಅಕ್ರಮ ಸಂಬಂಧದ ಶಂಕೆಯಿಂದ ಮಹಿಳೆ ಹಾಗೂ ಪುರುಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗಣಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಗಣಿ ಗ್ರಾಮದ ಸೋಮಲಿಂಗಪ್ಪ ಮತ್ತು ಪಾರ್ವತಿ ಎಂದು ಗುರುತಿಸಲಾಗಿದೆ. ಮಾಹಿತಿ ತಿಳಿದ ನಿಡಗುಂದಿ ಸಿಪಿಐ ಶರಣಗೌಡರ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಪಾರ್ವತಿ ಮತ್ತು ಸೋಮಲಿಂಗಪ್ಪ ನಡುವೆ ಅಕ್ರಮ ಸಂಬಂಧವಿತ್ತು ಎನ್ನುವ ಶಂಕೆಯಿಂದ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.