alex Certify ವೋಟ್ ಹಾಕಿಲ್ಲ ಎಂದು ಜಗಳ, ಕೊಲೆಯಲ್ಲಿ ಅಂತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೋಟ್ ಹಾಕಿಲ್ಲ ಎಂದು ಜಗಳ, ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಶುಲ್ಲಕ ವಿಚಾರಕ್ಕೆ ಜಗಳವಾಗಿ ಯುವಕನೊಬ್ಬ ದೊಡ್ಡಪ್ಪನನ್ನು ಹತ್ಯೆ ಮಾಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಡಿ. ಶೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

56 ವರ್ಷದ ಕೃಷ್ಣಪ್ಪ ಮೃತಪಟ್ಟವರು. ಆದಿತ್ಯ ಕೊಲೆ ಆರೋಪಿಯಾಗಿದ್ದಾನೆ. ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಸೋಲು ಗೆಲುವಿನ ವಿಚಾರಕ್ಕೆ ಕೃಷ್ಣಪ್ಪ ಮತ್ತು ಗಣೇಶಪ್ಪ ಸಹೋದರರ ನಡುವೆ ಜಗಳ ಆರಂಭವಾಗಿದೆ,

ವೋಟ್ ಹಾಕಿಲ್ಲ ಎಂದು ಜಗಳ ನಡೆದಿದ್ದು, ಗಣೇಶಪ್ಪನ ಮಗ ಆದಿತ್ಯ ಕೃಷ್ಣಪ್ಪನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...