
ರಾಯಚೂರು: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನೀಲವಂಜಿ ಗ್ರಾಮದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮಾರ್ಕಂಡಯ್ಯ(28) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಮಾರ್ಕಂಡಯ್ಯನ ಕಾಲು ಮುರಿದು, ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.