ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ಸಮುದ್ರದ ಅಲೆಗೆ ಸಿಲುಕಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಬೆಂಗಳೂರು ಮೂಲದ ವಿದ್ಯಾರ್ಥಿ 20 ವರ್ಷದ ಪವನ್ ನಾಯ್ಕ್ ಮೃತಪಟ್ಟವರು ಎಂದು ಹೇಳಲಾಗಿದೆ.
ಬೆಮಗಳೂರು ಎಲೆಕ್ಟ್ರಾನಿಕ್ ಸಿಟಿ ಇಂದ ಮುರ್ಡೇಶ್ವರಕ್ಕೆ ಆರು ಜನ ಪ್ರವಾಸಕ್ಕೆ ಬಂದಿದ್ದು, ಪವನ್ ಸೇರಿದಂತೆ ಮೂವರು ಈಜಲು ಸಮುದ್ರಕ್ಕೆ ಇಳಿದಿದ್ದರು. ಇವರಲ್ಲಿ ಪವನ್ ನಾಯ್ಕ್ ಮೃತಪಟ್ಟಿದ್ದು, ಸ್ಥಳೀಯರು ಕಾರ್ಯಾಚರಣೆ ನಡೆಸಿ ಅಪಾಯಕ್ಕೆ ಸಿಲುಕಿದ್ದ ಮತ್ತಿಬ್ಬರನ್ನು ರಕ್ಷಿಸಿದ್ದಾರೆ. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.