ಬೆಂಗಳೂರು: ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ದೆಹಲಿಗೆ ತೆರಳಿದ್ದಾರೆ. ವರಿಷ್ಠರನ್ನು ಭೇಟಿಯಾಗಿ ಪಂಚಮಸಾಲಿ ಸಮಾವೇಶದ ಕುರಿತಾಗಿ ಮಾಹಿತಿ ನೀಡಲಿದ್ದಾರೆ.
ಮುಖ್ಯಮಂತ್ರಿ, ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದು ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಹೈಕಮಾಂಡ್ ಸೂಚನೆ ಮೇರೆಗೆ ದೆಹಲಿಗೆ ತೆರಳಿದ್ದಾರೆ. ಪಂಚಮಸಾಲಿ ಹೋರಾಟದ ವೇಳೆ ಅವರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದೆ.
ಯತ್ನಾಳ್ ಅವರು ದೆಹಲಿಯಲ್ಲಿ ಇರುವಾಗಲೇ ಸಚಿವ ಮುರುಗೇಶ್ ನಿರಾಣಿ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು ದೆಹಲಿಗೆ ಬರುವಂತೆ ತಡರಾತ್ರಿ ಬುಲಾವ್ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ ಸಚಿವ ನಿರಾಣಿ ಪಂಚಮಸಾಲಿ ಸಮುದಾಯದ ಸಮಾವೇಶದ ಬಗ್ಗೆ ಹೈಕಮಾಂಡ್ ಗೆ ವಿವರ ನೀಡಲಿದ್ದಾರೆ.