ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ರಾಜ್ಯದ ಅಭಿವೃದ್ದಿಗೆ ಪೂರಕವಾಗಿಲ್ಲ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಟೀಕೆ ಮಾಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವರು ಗ್ಯಾರಂಟಿಗಳನ್ನ ಘೋಷಣೆ ಮಾಡುವಾಗ ಯಾವುದೇ ಷರತ್ತು ಹಾಕಿರಲಿಲ್ಲ, ಆದ್ರೆ ಈಗ ಗ್ಯಾರಂಟಿ ಯೋಜನೆಗಳಿಗೆ ಷರತ್ತು ವಿಧಿಸಿದ್ದಾರೆ. ಬಿಜೆಪಿ ಸರ್ಕಾರದ 20 ಹೆಚ್ಚು ಯೋಜನೆಯನ್ನು ಕೈ ಬಿಟ್ಟು ಜನರಿಗೆ ಸಿಎಂ ಸಿದ್ದರಾಮಯ್ಯ ಮೋಸ ಮಾಡಿದ್ದಾರೆ. ಬಜೆಟ್ ನಲ್ಲಿ ಬರೀ ಅಲ್ಪಸಂಖ್ಯಾತ ಸಮುದಾಯಕ್ಕೆ ಮಾತ್ರ ಯೋಜನೆ ಘೋಷಣೆ ಮಾಡಿದ್ದಾರೆ ಎಂದು ಕಿಡಿಕಾರಿದರು.
ಬಿಜೆಪಿಗೆ ಬೈದಿದ್ದೇ ಹೆಚ್ಚು : ಪ್ರಹ್ಲಾದ್ ಜೋಶಿ ವಾಗ್ದಾಳಿ
ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿದ್ದಕ್ಕಿಂತ ಬಿಜೆಪಿಗೆ ಬೈದಿದ್ದೇ ಹೆಚ್ಚು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಬಿಜೆಪಿ ಅವಧಿಯಲ್ಲಿ ದೇಶದಲ್ಲಿ ಕೋವಿಡ್ ವ್ಯಾಕ್ಸಿನ್ ತಯಾರಿಸಿ ಎಲ್ಲರಿಗೂ ನೀಡಿದ್ದೇವೆ. ವಿದೇಶಗಳಿಗೆ ಕೊಟ್ಟಿದ್ದನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯ ಭಾರತ ದ್ವೇಷಿ ರಾಹುಲ್ ಗಾಂಧಿ ರೀತಿ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಆಸ್ತಿ ದರ ಏರಿಕೆ ಮಾಡಿದ್ದಾರೆ. ಅಬಕಾರಿ ಟಾರ್ಗೆಟ್ ಕೊಟ್ಟಿದ್ದಾರೆ. ಎಲ್ಲರಿಗೂ ಮದ್ಯಪಾನ ಮಾಡಿಸಿ ಹಣ ತಂದುಕೊಡಿ ಅನ್ನುತ್ತಾರೆ. ಎನ್ ಇ ಪಿ ಗೆ ಮೊದಲು ಕಾಂಗ್ರೆಸ್ ಒಪ್ಪಿಗೆ ನೀಡಿತ್ತು. ಆದರೆ ಇವತ್ತು ಕೈ ಬಿಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ.