ಚಿತ್ರದುರ್ಗ: ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ.
ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂತ್ರಸ್ತ ಬಾಲಕಿಯರ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಳ್ಳಲಾಗಿದೆ. ಮಕ್ಕಳ ಸಮಿತಿ ಸಮ್ಮುಖದಲ್ಲಿ ವಿಡಿಯೋ ಚಿತ್ರೀಕರಣ ಮಾಡಿ ಹೇಳಿಕೆ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಇಂದು ಬಾಲಕಿಯರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಾಧ್ಯತೆ ಇದೆ. ಘಟನೆ ನಡೆದ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದು ಯಾರನ್ನು ವಶಕ್ಕೆ ಪಡೆದುಕೊಂಡಿಲ್ಲ.
ಬಾಲಕಿಯರ ಹೇಳಿಕೆಯ ಮೇಲೆ ಪೋಕ್ಸೋ ಕೇಸ್ ನಿಂತಿದೆ. ಮುರುಘಾಶರಣರು ಹಾಗೂ ವಿವಿಧ ಮಠಾಧೀಶರು ಗಣ್ಯರೊಂದಿಗೆ ಸಂಧಾನ ಸಭೆ ಕೂಡ ನಡೆಸಲಾಗಿದೆ ಎಂದು ಹೇಳಲಾಗಿದೆ.