
ಚಿತ್ರದುರ್ಗ: ಚಿತ್ರದುರ್ಗದ ಮುರುಗಾ ಶರಣರ ವಿರುದ್ಧ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಇಂದು ಸ್ವಾಮೀಜಿ ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ.
ಬಂಧನದಲ್ಲಿ ಇರಿಸಿ ವಿಚಾರಣೆ ಪೂರ್ಣಗೊಳಿಸುವುದಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಶ್ರೀಗಳು ಇಂದು ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಶರಣಾಗುವರು.
ದಾವಣಗೆರೆಯಿಂದ ಆಗಮಿಸಿ ಕೋರ್ಟ್ ಗೆ ಅವರು ಶರಣಾಗಲಿದ್ದು, ನಂತರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುವುದು. ವೈದ್ಯಕೀಯ ತಪಾಸಣೆಯ ನಂತರ ಪೊಲೀಸರು ಅವರನ್ನು ಕಾರಾಗೃಹಕ್ಕೆ ಬಿಡಲಿದ್ದಾರೆ.