
ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾಗಲಿದೆ.
ನ್ಯಾಯಾಂಗ ಬಂಧನ ಅವಧಿ ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 11 ಗಂಟೆಗೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಕೋರ್ಟ್ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸುವ ಸಾಧ್ಯತೆ ಇದೆ. ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಲಿದೆ.
ಹಾಸ್ಟೆಲ್ ಮಹಿಳಾ ವಾರ್ಡನ್ ನ್ಯಾಯಾಂಗ ಬಂಧನ ಅವಧಿಯು ಅಂತ್ಯವಾಗಿದ್ದು, ಶಿವಮೊಗ್ಗದ ಕಾರಾಗೃಹದಿಂದ ಅವರನ್ನು ಪೊಲೀಸರು ಕೋರ್ಟ್ ಗೆ ಕರೆತರಲಿದ್ದಾರೆ. ಕೋರ್ಟ್ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಲಿದೆ ಎನ್ನಲಾಗಿದೆ.