alex Certify BREAKING: ಚಿತ್ರದುರ್ಗ ಕಾರಾಗೃಹದಿಂದ ಮುರುಘಾ ಶರಣರ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಚಿತ್ರದುರ್ಗ ಕಾರಾಗೃಹದಿಂದ ಮುರುಘಾ ಶರಣರ ಬಿಡುಗಡೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾ ಶರಣರನ್ನು ಬಿಡುಗಡೆ ಮಾಡಲಾಗಿದೆ. ಶ್ರೀಗಳ ಬಂಧನದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ ಹಿನ್ನೆಲೆಯಲ್ಲಿ ಶ್ರೀಗಳನ್ನು ಬಿಡುಗಡೆ ಮಾಡಲಾಗಿದೆ.

ಮುರುಘಾ ಶರಣರ ಬಿಡುಗಡೆ ಮಾಡುವಂತೆ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಬಂಧಿತರಾಗಿದ್ದ ಮುರುಘಾ ಶ್ರೀಗಳನ್ನು ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ.

2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯ ಮುರುಘಾ ಶ್ರೀಗೆ ಬಂಧನದ ವಾರೆಂಟ್ ಜಾರಿ ಮಾಡಿತ್ತು. ಕೋರ್ಟ್ ಆದೇಶದಂತೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರ ತಂಡ ದಾವಣಗೆರೆ ವಿರಕ್ತ ಮಠಕ್ಕೆ ತೆರಳಿ ಮುರುಘಾ ಶ್ರೀಗಳನ್ನು ಬಂಧಿಸಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...