alex Certify ಮುರುಘಾ ಸ್ವಾಮಿಜಿ ವೈದ್ಯಕೀಯ ಪರೀಕ್ಷೆಗೆ ಕೋರ್ಟ್ ಅನುಮತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುರುಘಾ ಸ್ವಾಮಿಜಿ ವೈದ್ಯಕೀಯ ಪರೀಕ್ಷೆಗೆ ಕೋರ್ಟ್ ಅನುಮತಿ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವೈದ್ಯಕೀಯ ತಪಾಸಣೆಗೆ ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ.

ಜೈಲಿನಿಂದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿ ಸ್ವಾಮೀಜಿ ವೈದ್ಯಕೀಯ ಪರೀಕ್ಷೆ ನಡೆಸಲು ಬುಧವಾರ ಕೋರ್ಟ್ ಅನುಮತಿ ನೀಡಿದೆ. ಸ್ವಾಮೀಜಿಗೆ ಹೃದಯ ಸಂಬಂಧಿ ಸಮಸ್ಯೆ ತೀವ್ರವಾಗಿದ್ದು, ಕರೋನರಿ ಅಂಜಿಯೋಗ್ರಾಮ್ ನಡೆಸಿ ಪರಿಶೀಲನೆ ಮಾಡಬೇಕಿದೆ ಎಂದು ತಜ್ಞ ವೈದ್ಯರು ನೀಡಿದ ವರದಿಯ ಆಧಾರದ ಮೇಲೆ ಕಾರಾಗೃಹದ ಅಧೀಕ್ಷಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಅವರು ವೈದ್ಯಕೀಯ ಪರೀಕ್ಷೆಗೆ ಅನುಮತಿ ನೀಡಿದ್ದಾರೆ.

ಕಾರಾಗೃಹ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಕೋರ್ಟ್ ಗಮನಕ್ಕೆ ತರಬೇಕೆಂದು ಸೂಚಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...