ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುರುಘಾ ಶರಣರ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾಗಲಿದೆ.
ಮೂವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯವಾಗಲಿದೆ. ಎ 1 ಮುರುಘಾ ಶರಣರು, ಎ 2 ವಾರ್ಡನ್ ರಶ್ಮಿ ಹಾಗೂ ಎ 4 ಮಠದ ಮ್ಯಾನೇಜರ್ ಪರಮಶಿವಯ್ಯ ನ್ಯಾಯಾಂಗ ಬಂಧನ ಅವಧಿ ಅಂತ್ಯವಾಗಲಿದ್ದು ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ ನ್ಯಾಯಾಲಯಕ್ಕೆ ಇಂದು ಅವರನ್ನು ಹಾಜರುಪಡಿಸಲಾಗುವುದು.
ಇನ್ನು ಮುರುಘಾ ಶರಣರ ವಿರುದ್ಧ ಸುಳ್ಳು ಕೇಸು ದಾಖಲಿಸಲು ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.
ಅವರ ಪತ್ನಿ ಸೌಭಾಗ್ಯ ಬಸವರಾಜನ್ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಕೂಡ ನಡೆಯಲಿದೆ. ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಗುವುದು. ಎಸ್ ಕೆ ಬಸವರಾಜ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.