
ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಎರಡನೇ ಪೋಕ್ಸೋ ಪ್ರಕರಣದ ವಿಚಾರಣೆ ನಡೆಯುವಾಗಲೇ ಜಿಲ್ಲಾ ಕಾರಾಕೃಹ ಅಧೀಕ್ಷಕರು ಬಿಡುಗಡೆ ಮಾಡಿರುವ ಕ್ರಮದ ಕುರಿತು ತನಿಖೆ ನಡೆಸುವಂತೆ ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಎರಡನೇ ಪೋಕ್ಸೋ ಪ್ರಕರಣದ ಬಾಡಿ ವಾರಂಟ್ ಅರ್ಜಿಯ ವಿಚಾರಣೆಯನ್ನು ಶನಿವಾರ ನಡೆಸಿದ ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಅವರು ಕಾರಾಗೃಹ ಇಲಾಖೆ ಎಡಿಜಿಪಿಗೆ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ. ವಿಚಾರಣೆಯನ್ನು ನವೆಂಬರ್ 20ಕ್ಕೆ ಮುಂದೂಡಲಾಗಿದೆ.