ಚಿತ್ರದುರ್ಗ: ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಹೀಗಾಗಿ ಮಠದ ದೈನಂದಿನ ಆಡಳಿತಾತ್ಮಕ ಮತ್ತು ಧಾರ್ಮಿಕ ಚಟುವಟಿಕೆಗಳಿಗೆ ತೊಂದರೆ ಉಂಟಾಗಿದ್ದು, ಸಮರ್ಪಕ ನಿರ್ವಹಣೆಗೆ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಭಕ್ತರು ಒತ್ತಾಯಿಸಿದ್ದಾರೆ.
ಮಾಜಿ ಸಚಿವ ಏಕಾಂತಯ್ಯ ಅವರ ಅಧ್ಯಕ್ಷತೆಯಲ್ಲಿ ನಿಜಲಿಂಗಪ್ಪ ಸ್ಮಾರಕದ ಆವರಣದಲ್ಲಿ ನಡೆದ ವೀರಶೈವ ಲಿಂಗಾಯಿತ ಸಮಾಜದ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಮುರುಘಾ ಮಠಕ್ಕೆ ಮುಂದಿನ ಪೀಠಾಧಿಪತಿಯನ್ನು ಆಯ್ಕೆ ಮಾಡಬೇಕೆಂಬ ಒತ್ತಾಯ ಕೇಳಿಬಂದಿದ್ದು, ಸರ್ಕಾರ ಮಧ್ಯ ಪ್ರವೇಶಿಬೇಕೆಂಬುದು ಭಕ್ತರ ಒತ್ತಾಯವಾಗಿದೆ.