
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರು ಜೈಲು ಪಾಲಾಗಿದ್ದು, ಮಠದ ಪೀಠಾಧ್ಯಕ್ಷ ಸ್ಥಾನದಿಂದ ಅವರನ್ನು ವಜಾಗೊಳಿಸಬೇಕೆಂಬ ಒತ್ತಡ ಹೆಚ್ಚಾಗಿದೆ.
ಡಿಸೆಂಬರ್ 3 ರಂದು ವೀರಶೈವ ಲಿಂಗಾಯಿತ ಸಮಾಜದಿಂದ ಸಭೆ ಕರೆಯಲಾಗಿದೆ. ಚಿತ್ರದುರ್ಗ ತಾಲೂಕಿನ ಶಿಬಾರ ಗ್ರಾಮದ ಎಸ್. ನಿಜಲಿಂಗಪ್ಪ ಸ್ಮಾರಕ ಆವರಣದಲ್ಲಿ ಸಭೆ ನಡೆಯಲಿದೆ. ಮಾಜಿ ಸಚಿವ ಹೆಚ್. ಏಕಾಂತಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಮುರುಘಾ ಮಠದ ಪೀಠಾಧ್ಯಕ್ಷ ಸ್ಥಾನದಿಂದ ಮುರುಘಾ ಶರಣರನ್ನು ವಜಾಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುವುದು. ಸಭೆಯಲ್ಲಿ ಚರ್ಚಿಸಿ ಮುಂದಿನ ನಡೆಯ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.