alex Certify BIG NEWS: ಮುರುಘಾ ಶ್ರೀ ಅರ್ಜಿ ವಿಚಾರಣೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾ ಶ್ರೀ ಅರ್ಜಿ ವಿಚಾರಣೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಅರ್ಜಿ ವಿಚಾರಣೆಯನ್ನು ಚಿತ್ರದುರ್ಗ ಕೋರ್ಟ್ ಮುಂದೂಡಿದೆ.

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಜೈಲು ಸೇರಿದ್ದ ಮುರುಘಾ ಶ್ರೀಗೆ ನ.8 ರಂದು ಹೈಕೋರ್ಟ್ ಒಂದು ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ಶ್ರೀಗಳ ವಿರುದ್ಧ ಇನ್ನೊಂದು ಪ್ರಕರಣದ ವಿಚಾರಣೆ ಬಾಕಿ ಹಿನ್ನೆಲೆಯಲ್ಲಿ ಜಾಮೀನು ಸಿಕ್ಕರೂ ಬಿಡುಗಡೆಯಾಗಿರಲಿಲ್ಲ.

ಈ ಹಿನ್ನೆಲೆಯಲ್ಲಿ ಮುರುಘಾ ಶ್ರೀ ಪರ ವಕೀಲರು ಶ್ರೀಗಳ ಬಿಡುಗಡೆಗೆ ಕೋರಿ ಚಿತ್ರದುರ್ಗ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...