alex Certify ಮುರುಘಾ ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆ ಇಂದು: ಜೈಲು ವಾಸ ಮುಂದುವರಿಕೆ, ಆಸ್ಪತ್ರೆಗೆ ಸ್ಥಳಾಂತರ ಬಗ್ಗೆ ತೀರ್ಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುರುಘಾ ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆ ಇಂದು: ಜೈಲು ವಾಸ ಮುಂದುವರಿಕೆ, ಆಸ್ಪತ್ರೆಗೆ ಸ್ಥಳಾಂತರ ಬಗ್ಗೆ ತೀರ್ಮಾನ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾಶರಣರ ಜಾಮೀನು ಅರ್ಜಿ ವಿಚಾರಣೆ ಇಂದು ಎರಡನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಲ್ಲಿ ನಡೆಯಲಿದೆ.

ಸ್ವಾಮೀಜಿಗೆ ಜೈಲು ವಾಸ ಮುಂದುವರಿಕೆ, ಜಾಮೀನು ಅಥವಾ ಆಸ್ಪತ್ರೆಗೆ ಸ್ಥಳಾಂತರ ಮಾಡುವ ಬಗ್ಗೆ ಇಂದು ನಿರ್ಧಾರವಾಗಲಿದೆ. ಸೆ. 14 ರವರೆಗೆ ಸ್ವಾಮೀಜಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ಹೃದಯ ಚಿಕಿತ್ಸೆಗೆ ಸಂಬಂಧಿಸಿದಂತೆ ಆಸ್ಪತ್ರೆಗೆ ಸ್ಥಳಾಂತರಿಸಲು ಸ್ವಾಮೀಜಿ ಪರ ವಕೀಲರು ಮನವಿ ಮಾಡಿದ್ದು, ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಕೋರ್ಟ್ ಸೂಚನೆ ನೀಡಿತ್ತು. ಆಂಜಿಯೋಗ್ರಾಮ್ ಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಕರೆದೊಯ್ಯಲು ಅವಕಾಶ ನೀಡುವಂತೆ ಮನವಿ ಮಾಡಲಾಗಿದೆ. ಇದರ ಬಗ್ಗೆಯೂ ಶ್ರೀಗಳ ಆರೋಗ್ಯ ಪರಿಸ್ಥಿತಿ ವರದಿ ಆಧಾರದ ಮೇಲೆ ಕೋರ್ಟ್ ಸೂಚನೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...