ಮಂಗಳೂರು: ಮಂಗಳೂರಿನಲ್ಲಿ ಗುರುವಾರ ರಾತ್ರಿ ಮುಸ್ಲಿಂ ಯುವಕನ ಹತ್ಯೆಯಾದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ನಗರದ ಎಲ್ಲಾ ಮುಸ್ಲಿಮರು ಶುಕ್ರವಾರದ ಪ್ರಾರ್ಥನೆಯನ್ನು ಮನೆಯಲ್ಲಿಯೇ ನಡೆಸುವಂತೆ ಮಂಗಳೂರು ಪೊಲೀಸರು ಮನವಿ ಮಾಡಿದ್ದಾರೆ.
ಮಂಗಳೂರು ಹೊರವಲಯದಲ್ಲಿರುವ ಸುರತ್ಕಲ್ ಸಮೀಪದ ಮಂಗಲಪೇಟೆ ನಿವಾಸಿ ಮೊಹಮ್ಮದ್ ಫಾಝಿಲ್ ನನ್ನು ದುಷ್ಕರ್ಮಿಗಳ ತಂಡ ಹತ್ಯೆ ಮಾಡಿದೆ.
ಇದರ ಬೆನ್ನಲ್ಲೇ ಪೊಲೀಸರು ಶುಕ್ರವಾರದ ಪ್ರಾರ್ಥನೆಯನ್ನು ಮನೆಯಲ್ಲಿಯೇ ನಡೆಸುವಂತೆ ಮುಸ್ಲಿಂ ಸಮುದಾಯಕ್ಕೆ ಸೂಚಿಸಿದ್ದಾರೆ. ಪ್ರತಿಯೊಂದು ಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚಿನ ಹಿತದೃಷ್ಟಿಯಿಂದ ನಾವು ಎಲ್ಲಾ ಮುಸ್ಲಿಂ ಮುಖಂಡರು ತಮ್ಮ ಮನೆಗಳಲ್ಲಿ ತಮ್ಮ ಪ್ರಾರ್ಥನೆಗಳನ್ನು ಮಾಡುವಂತೆ ನಾವು ವಿನಂತಿಸಿದ್ದೇವೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಸುರತ್ಕಲ್ ಸುತ್ತಮುತ್ತಲಿನ ನಾಲ್ಕು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಶನಿವಾರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಪ್ರಮುಖ ಪ್ರದೇಶಗಳಲ್ಲಿ ಪರಿಸ್ಥಿತಿಯ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದೇವೆ ಎಂದು ಹೇಳಿದರು.
ಸುರತ್ಕಲ್, ಮೂಲ್ಕಿ, ಬಜ್ಪೆ ಮತ್ತು ಪಣಂಬೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶುಕ್ರವಾರವೂ ಮದ್ಯದಂಗಡಿಗಳನ್ನು ಮುಚ್ಚಲಾಗಿದ್ದು, ಒಂದು ಗುಂಪಿನಲ್ಲಿ ಐದಕ್ಕಿಂತ ಹೆಚ್ಚು ವ್ಯಕ್ತಿಗಳನ್ನು ಪೊಲೀಸರು ಅನುಮತಿ ಇಲ್ಲ.