alex Certify ದೇಶದಲ್ಲಿ ಮುಸ್ಲಿಂ ಶಿಕ್ಷಕರು, ವಿದ್ಯಾರ್ಥಿಗಳ ಸಂಖ್ಯೆ ಗಣನೀಯ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿ ಮುಸ್ಲಿಂ ಶಿಕ್ಷಕರು, ವಿದ್ಯಾರ್ಥಿಗಳ ಸಂಖ್ಯೆ ಗಣನೀಯ ಹೆಚ್ಚಳ

ನವದೆಹಲಿ: ದೇಶದಲ್ಲಿ ಮುಸ್ಲಿಂ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಶಿಕ್ಷಣ ಸಚಿವಾಲಯದ ರಾಜ್ಯ ಸಚಿವ ಡಾ. ಸುಭಾಸ್ ಸರ್ಕಾರ್ ಅವರು ಈ ಮಾಹಿತಿ ನೀಡಿದ್ದಾರೆ.

ಉನ್ನತ ಶಿಕ್ಷಣ 2020-21 ರ ಅಖಿಲ ಭಾರತ ಸಮೀಕ್ಷೆಯ ಪ್ರಕಾರ, 2020-21 ರಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ದಾಖಲಾತಿ 19.22 ಲಕ್ಷಕ್ಕೆ ಏರಿಕೆಯಾಗಿದೆ. 2016-17ರಲ್ಲಿ 17.39 ಲಕ್ಷ ದಷ್ಟು ಇತ್ತು. 2016-17 ರಲ್ಲಿ 67,215 ರಷ್ಟು ಇದ್ದ ಮುಸ್ಲಿಂ ಸಮುದಾಯದ ಶಿಕ್ಷಕರ ಸಂಖ್ಯೆ 2020-21 ರಲ್ಲಿ 86,314 ಕ್ಕೆ ಗಮನಾರ್ಹ ಏರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...