ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಕಳೆಂಜ ಗ್ರಾಮದ ಮಸೂದ್ ಮತ್ತು ಸುರತ್ಕಲ್ ನ ಕಾಟಿಪಳ್ಳ ಮಂಗಳಪೇಟೆಯ ಮೊಹಮ್ಮದ್ ಫಾಸಿಲ್ ಕುಟುಂಬದವರಿಗೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ತಲಾ 30 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ.ಎಸ್. ಮೊಹಮ್ಮದ್ ಮಸೂದ್ ನೇತೃತ್ವದಲ್ಲಿ ಮುಖಂಡರು ಸಭೆ ಸೇರಿ ಈ ನಿರ್ಧಾರ ಕೈಗೊಂಡಿರುವುದಾಗಿ ಕಮಿಟಿಯ ಉಪಾಧ್ಯಕ್ಷ ಬಿ.ಎಂ. ಮಮ್ತಾಜ್ ಅಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದು, ಸರ್ಕಾರದಿಂದ 25 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ. ಮುಸ್ಲಿಂ ಸಮುದಾಯದ ಇಬ್ಬರು ಯುವಕರ ಹತ್ಯೆ ನಡೆದಿದ್ದರೂ ಸಿಎಂ ಅವರ ಕುಟುಂಬದವರನ್ನು ಭೇಟಿಯಾಗಿಲ್ಲ. ಪರಿಹಾರ ಕೂಡ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ತಾರತಮ್ಯ ನೀತಿಯನ್ನು ಖಂಡಿಸಿ ನಾವೇ ದೇಣಿಗೆ ಸಂಗ್ರಹಿಸಿ ಮಸೂದ್ ಮತ್ತು ಫಾಸಿಲ್ ಕುಟುಂಬದವರಿಗೆ ನೀಡುತ್ತೇವೆ ಎಂದು ಹೇಳಿದ್ದಾರೆ.