ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಕೆಲ ಮುಸ್ಲಿಂ ಯುವಕರು ಸ್ವಾತಂತ್ರ್ಯ ದಿನದಂದು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಘಟನೆ ನಡೆದಿದೆ. ಲಾಟೇರಿ ತಹಸಿಲ್ ಪ್ರಧಾನ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮುಸ್ಲಿಂ ಯುವಕರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ.
ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸ್ಥಳೀಯ ಬಿಜೆಪಿ ಮುಖಂಡರು ಪುರಸಭೆ ನಿರೀಕ್ಷಕರಿಗೆ ಮನವಿ ಪತ್ರ ಬರೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿಯನ್ನೂ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಮುಖಂಡ ಸಂಜಯ್ ಜೈನ್ ಮಾತನಾಡಿ, ಜಿಲ್ಲಾ ಆವರಣದಲ್ಲಿ ಗುರುವಾರ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಮುಗಿಯುತ್ತಿದ್ದಂತೆ ಕೆಲವು ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ ಘೋಷಣೆಗಳನ್ನು ಕೂಗಿದರೆ, ಮುಸ್ಲಿಂ ವಿದ್ಯಾರ್ಥಿಗಳು ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳನ್ನು ಕೂಗಿ ವಾಗ್ವಾದ ನಡೆಸಿದರು. ಸ್ಥಳದಲ್ಲೇ ಒಬ್ಬ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದು, ಇತರರು ಪರಾರಿಯಾಗಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಉಳಿದ ವಿದ್ಯಾರ್ಥಿಗಳನ್ನು ಬಂಧಿಸಬೇಕೆಂದು ಅವರು ಹೇಳಿದ್ದಾರೆ.