alex Certify ಪ್ರತಿ ಬಾರಿ ಕಾಂಗ್ರೆಸ್ ಬೆಂಬಲಿಸಿದ್ದೇವೆ, ಮುಸ್ಲಿಮರಿಗೆ ಟಿಕೆಟ್ ಕೊಡಿ: ಅಂಜುಮನ್ ಕಮಿಟಿ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿ ಬಾರಿ ಕಾಂಗ್ರೆಸ್ ಬೆಂಬಲಿಸಿದ್ದೇವೆ, ಮುಸ್ಲಿಮರಿಗೆ ಟಿಕೆಟ್ ಕೊಡಿ: ಅಂಜುಮನ್ ಕಮಿಟಿ ಮನವಿ

ಧಾರವಾಡ ಜಿಲ್ಲೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಡಲಾಗಿದೆ. ಜಿಲ್ಲೆಯ ಯಾವುದಾದರೂ ಒಂದು ಕ್ಷೇತ್ರದಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡಬೇಕು ಎಂದು ಅಂಜುಮನ್ ಕಮಿಟಿ ಮುಖಂಡರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಹುಬ್ಬಳ್ಳಿಯ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಮನವಿ ಸಲ್ಲಿಸಲಾಗಿದ್ದು, ಪ್ರತಿ ಸಲವೂ ನಾವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದೇವೆ. ಈ ಬಾರಿ ಧಾರವಾಡ ಜಿಲ್ಲೆಯ ಯಾವುದಾದರೂ ಒಂದು ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದಾರೆ. ಸುರ್ಜೆವಾಲಾ ಅವರಿಗೆ ಅಂಜುಮನ್ ಕಮಿಟಿ ಮುಖಂಡರು ಮನವಿ ಸಲ್ಲಿಸಿದ್ದಾರೆ. ಮುಸ್ಲಿಂ ಮುಖಂಡರ ಮನವಿ ಪರಿಗಣಿಸಿದ ಸುರ್ಜೇವಾಲಾ ಈ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...