ಮಂಗಳೂರು: ಫಾಜಿಲ್, ಮಸೂದ್ ಹತ್ಯೆ ಪ್ರಕರಣದ ತನಿಖೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಮುಸ್ಲಿಂ ಐಕ್ಯತಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗಿದೆ.
ಮಂಗಳೂರಿನ ಕ್ಲಾಕ್ ಟವರ್ ಬಳಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ ನಡೆಸಲಾಗಿದ್ದು, ಪ್ರವೀಣ್ ನೆಟ್ಟಾರು ಹತ್ಯೆಯಾದಾಗ ಸರ್ಕಾರದಿಂದ 25 ಲಕ್ಷ ರೂಪಾಯಿ ಪರಿಹಾರ ನೀಡಲಾಗಿತ್ತು. ರಾಜ್ಯ ಸರ್ಕಾರದಿಂದ ಪ್ರವೀಣ್ ನೆಟ್ಟಾರು ಕುಟುಂಬದವರಿಗೆ 25 ಲಕ್ಷ ರೂಪಾಯಿ ಪರಿಹಾರ ನೀಡಿದ್ದು, ಮಸೂದ್ ಮತ್ತು ಫಾಜಿಲ್ ಕುಟುಂಬಗಳಿಗೆ ಪರಿಹಾರ ನೀಡಿಲ್ಲ. ಅವರ ನಿವಾಸಕ್ಕೆ ಜಿಲ್ಲಾಧಿಕಾರಿಯೂ ಭೇಟಿ ನೀಡಿಲ್ಲ. ಕುಟುಂಬದವರಿಗೆ ಸಾಂತ್ವನ ಕೂಡ ಹೇಳಿಲ್ಲ ಎಂದು ಮುಸ್ಲಿಂ ಸಮುದಾಯದಿಂದ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಲಾಗಿದೆ. ಪೊಲೀಸರು ಬಗಿ ಬಂದೋಬಸ್ತ್ ಕೈಗೊಂಡಿದ್ದಾರೆ.