ಜೆಡಿಎಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ನೀಡಿದ್ದ ಶೇಕಡ 4ರಷ್ಟು ಮೀಸಲಾತಿಯನ್ನು ಪುನಃ ಜಾರಿಗೊಳಿಸುತ್ತೇವೆ ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
ಮುಂಡಗೋಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ನೀಡಿದ ಶೇಕಡ 4ರಷ್ಟು ಮೀಸಲಾತಿ ರದ್ದುಪಡಿಸಿ ಬಿಜೆಪಿ ಅನ್ಯಾಯ ಮಾಡಿದೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಪುನಃ ಮೀಸಲಾತಿ ಜಾರಿಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಪಾಪದಿಂದಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಅದರ ಫಲವನ್ನು ನಾವು ಅನುಭವಿಸುತ್ತಿದ್ದೇವೆ ಎಂದು ದೂರಿದ ಅವರು, ಜೆಡಿಎಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲಾತಿ ಮತ್ತೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.