ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲಾಗುವುದು. ರಾಜ್ಯ ಸರ್ಕಾರದಿಂದಲೇ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಅಸ್ತು ಎನ್ನಲಾಗಿದೆ.
ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಮುಂದಿನ ತಿಂಗಳು ಶಂಕುಸ್ಥಾಪನೆ ನೆರವೇರಿಸಲಾಗುವುದು. ಕಾಲೇಜು ನಿರ್ಮಾಣದ ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುವುದು.
ಪ್ರತಿ ಕಾಲೇಜಿಗೆ 2.50 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಸರ್ಕಾರ ವಕ್ಫ್ ಬೋರ್ಡ್ ನೀಡುವ ಅನುದಾನದಲ್ಲಿ ಕಾಲೇಜು ನಿರ್ಮಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್ ಕಣ್ಣೂರಿನಲ್ಲಿ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ 10 ಕಡೆ ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಿಸಲಾಗುವುದು ಎಂದು ರಾಜ್ಯ ಬೋರ್ಡ್ ಅಧ್ಯಕ್ಷ ಶಾಫಿ ಸಾಅದಿ ಮಾಹಿತಿ ನೀಡಿದ್ದಾರೆ.