alex Certify ಪಾಕ್​ ವಿರುದ್ಧ ಕಣಕ್ಕಿಳಿಯುತ್ತಿದ್ದಂತೆಯೇ ಭಾವುಕರಾದ ನಾಯಕ ರೋಹಿತ್ ಶರ್ಮಾ: ರಾಷ್ಟ್ರಗೀತೆ ವೇಳೆ ಕಣ್ಣೀರು‌ – ವಿಡಿಯೋ ವೈರಲ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಕ್​ ವಿರುದ್ಧ ಕಣಕ್ಕಿಳಿಯುತ್ತಿದ್ದಂತೆಯೇ ಭಾವುಕರಾದ ನಾಯಕ ರೋಹಿತ್ ಶರ್ಮಾ: ರಾಷ್ಟ್ರಗೀತೆ ವೇಳೆ ಕಣ್ಣೀರು‌ – ವಿಡಿಯೋ ವೈರಲ್​

ಮೆಲ್ಬೋರ್ನ್​: ಮೆಲ್ಬೋರ್ನ್​ನಲ್ಲಿ ಭಾನುವಾರ ನಡೆದ ಭಾರತ ಮತ್ತು ಪಾಕಿಸ್ತಾನದ ಕ್ರಿಕೆಟ್​ ಆಟದ ವೇಳೆ, ಟಾಸ್ ಗೆದ್ದ ಬಳಿಕ ಉಭಯ ತಂಡಗಳ ಆಟಗಾರರು ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದರು. ಭಾರತದ ರಾಷ್ಟ್ರಗೀತೆ ಹಾಡುವ ವೇಳೆಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಭಾವುಕರಾಗಿ ಕಣ್ಣೀರು ಹಾಕಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಭಾರತ-ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭಾವುಕರಾಗಿ ಕಣ್ಣೀರಿಟ್ಟಿರುವುದಾಗಿ ಶೀರ್ಷಿಕೆ ನೀಡಲಾಗಿದೆ. ಕಣ್ಣು ಮುಚ್ಚಿಕೊಂಡು ರಾಷ್ಟ್ರಗೀತೆ ಹಾಡಿರುವ ರೋಹಿತ್ ಶರ್ಮಾ ಕುರಿತಾದ ವೀಡಿಯೋವನ್ನು ಐಸಿಸಿ ಪೋಸ್ಟ್ ಮಾಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

ವಿಶೇಷ ಎಂದರೆ ಇದು ನಾಯಕನಾಗಿ ರೋಹಿತ್ ಶರ್ಮಾ ಅವರಿಗೆ ಮೊದಲ ಟಿ20 ವಿಶ್ವಕಪ್ ಪಂದ್ಯ. ಅದರಲ್ಲೂ ಸಾಂಪ್ರದಾಯಿಕ ಎದುರಾಳಿಗಳ ವಿರುದ್ಧ ಎದೆಯುಬ್ಬಿಸಿ ಕಣಕ್ಕಿಳಿದಿದ್ದ ಹಿಟ್​​ಮ್ಯಾನ್ ರಾಷ್ಟ್ರಗೀತೆ ಹಾಡುತ್ತಿದ್ದಂತೆ ಭಾವುಕರಾಗಿ ಕಣ್ಣೀರಿಟ್ಟಿದ್ದು, ಇದು ಅವರಿಗೆ ದೇಶದ ಬಗ್ಗೆ ಇರುವ ಅಭಿಮಾನವನ್ನು ಎತ್ತಿ ತೋರಿಸುತ್ತಿದೆ ಎಂದು ಸಾಕಷ್ಟು ಮಂದಿ ಕಮೆಂಟ್​ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...