
ಐಪಿಎಲ್ ಪಯಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸಾಕಷ್ಟು ಮಂದಿ ಅಭಿಮಾನಿಗಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಆರ್ ಸಿಬಿ ತಂಡವನ್ನ ಹೆಚ್ಚು ಮಂದಿ ಫಾಲೋ ಮಾಡ್ತಿದ್ದಾರೆ.
ಆದರೀಗ ಆರ್ ಸಿ ಬಿ ಖಾತೆಯನ್ನ ಸೋಷಿಯಲ್ ಮೀಡಿಯಾದಲ್ಲಿ ಫಾಲೋ ಮಾಡಿದ ಸಚಿನ್ ಪುತ್ರಿ ಸಾರಾ ತೆಂಡೂಲ್ಕರ್ ಅವರು ಹಂಚಿಕೊಂಡಿರುವ ಅದೊಂದು ಪೋಸ್ಟ್ ಗಮನ ಸೆಳೆಯುತ್ತಿದೆ.
ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ, ಸಾರಾ ನೋಟ್‌ಬುಕ್‌ನಲ್ಲಿ ಶೀರ್ಷಿಕೆಯೊಂದಿಗೆ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ – “ನಾನು RBC ಬದಲಿಗೆ ಯಾವಾಗಲೂ ತಪ್ಪಾಗಿ RCB ಬರೆಯುತ್ತೇನೆ”. ಎಂದಿದ್ದಾರೆ.
ಸಾರಾ ತಂದೆ ಸಚಿನ್ ತೆಂಡೂಲ್ಕರ್ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಮುಂಬೈ ಇಂಡಿಯನ್ಸ್ ಪರ ಮಾತ್ರ ಆಡಿದ್ದರು. ಸಾರಾ ಅವರ ಸಹೋದರ ಅರ್ಜುನ್ ತೆಂಡೂಲ್ಕರ್ ಕೂಡ ಮುಂಬೈ ಇಂಡಿಯನ್ಸ್ ಸೇರಿಕೊಂಡಿದ್ದರು.
