ನವದೆಹಲಿ : ದೆಹಲಿಯ ಜಂತರ್ ಮಂತರ್ ನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸಚಿವರು, ಶಾಸಕರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ಅನುದಾನ ಬಿಡುಗಡೆ, ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ ಖಂಡಿಸಿ ಕಾಂಗ್ರೆಸ್ ಸರ್ಕಾರ ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯವೆಸಗಿದೆ. ಅನುದಾನ ಬಿಡುಗಡೆಯಲ್ಲಿ ಅನ್ಯಾಯ ಮಾಡಿದೆ. ನಾವು ರಾಜ್ಯದ ಸಂಸದರಿಗೂ ಪತ್ರ ಬರೆದು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಡಲು ಬರಲು ಕರೆ ನೀಡಿದ್ದೆವು. ಇದೊಂದು ಬೃಹತ್ ಚಳುವಳಿ. ನಾವು 4 ಲಕ್ಷ 30 ಸಾವಿರ ಕೋಟಿ ತೆರಿಗೆ ಕಟ್ಟುತ್ತೇವೆ. 100 ರೂಪಾಯಿ ತೆರಿಗೆ ಕಟ್ಟಿದ್ದರೆ ಕೇವಲ 12 ರೂಪಾಯಿ ಮಾತ್ರ ನಮಗೆ ಬರುತ್ತಿದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ರಾಜ್ಯಗಳಿಗೆ ಹಣ ನೀಡಬೇಕು. ಆದರೆ ಹಣ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.