
ಹೊಸಪೇಟೆ: ತುಂಬಿದ ಕೊಡ ತುಳುಕಿತಲೇ ಪರಾಕ್ ಎಂದು ಮೈಲಾರಲಿಂಗೇಶ್ವರ ದೈವವಾಣಿಯಾಗಿದ್ದು, ಗೊರವಯ್ಯ ಕಾರ್ಣಿಕ ನುಡಿದಿದ್ದಾರೆ.
ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರ ಕ್ಷೇತ್ರದಲ್ಲಿ ಗೊರವಯ್ಯ ರಾಮಣ್ಣ ದೈವವಾಣಿ ನುಡಿದಿದ್ದಾರೆ. ತುಂಬಿದ ಕೊಡ ತುಳುಕಿತಲೇ ಪರಾಕ್ ಎಂದು ದೈವವಾಣಿಯಾಗಿದೆ.
ರಾಜ್ಯ ಮತ್ತು ದೇಶದಲ್ಲಿ ಉತ್ತಮ ಮಳೆ ಬೆಳೆಯಾಗಲಿದೆ ಎಂದು ಕಾರ್ಣಿಕ ಕುರಿತಾಗಿ ದೇವಸ್ಥಾನದ ವೆಂಕಪ್ಪಯ್ಯ ಒಡೆಯರ್ ವಿಶ್ಲೇಷಣೆ ಮಾಡಿದ್ದಾರೆ. ಕಾರ್ಣಿಕವನ್ನು ವರ್ಷದ ಭವಿಷ್ಯವಾಣಿ ಎಂದು ಹೇಳಲಾಗುತ್ತದೆ.