ಮೈಸೂರು: ಮೈಸೂರಿನ ಮಿನಿ ವಿಧಾನಸೌಧ ಹಿಂಭಾಗದಲ್ಲಿ ಬೆಳ್ಳಂ ಬೆಳಿಗ್ಗೆ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭವಾಗಿದೆ. ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರ ಆದೇಶದ ಮೇರೆಗೆ ಪೊಲೀಸ್ ಭದ್ರತೆಯಲ್ಲಿ ಕಟ್ಟಡಗಳ ತೆರವು ಕಾರ್ಯ ನಡೆದಿದೆ.
ಕಟ್ಟಡಗಳ ತೆರವಿಗೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಯಾವುದೇ ಮಾಹಿತಿ ನೀಡದೇ, ನೋಟಿಸ್ ಕೊಡದೇ ಏಕಾಏಕಿ ಕಟ್ಟಡಗಳನ್ನು ತೆರವು ಮಾಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಟ್ಟಡ ತೆರವಿಗೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಪೊಲೀಸರು ಹಾಗೂ ಸ್ಥಳೀಯ ನಿವಾಸಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಇನ್ನೊಂದೆಡೆ ಜೆಸಿಬಿ ಮೂಲಕ ಕಟ್ಟಡಗಳನ್ನು ತೆರವು ಮಾಡಲಾಗುತ್ತಿದೆ. ಸ್ಥಳದಲ್ಲಿ ಮುಂಜಾಗೃತಾ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.