ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಇಂದಿನಿಂದ ಮೂರು ದಿನ ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ಇಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನಿಂದ ರಸ್ತೆ ಮೂಲಕ ಪ್ರಯಾಣ ಆರಂಭಿಸಿ ಮೈಸೂರಿಗೆ ತಲುಪಲಿದ್ದಾರೆ. ಮಹಾರಾಣಿ ವಿಜ್ಞಾನ ಕಾಲೇಜಿನ ಹಾಸ್ಟೆಲ್ ಗೆ ಭೇಟಿ ನೀಡಲಿದ್ದಾರೆ. ನಂತರ ಇಂದು ಸಂಜೆ 4 ಗಂಟೆಗೆ ನಡೆಯುವ ವೈಮಾನಿಕ ಪ್ರದರ್ಶನ ವೀಕ್ಷಣೆ ಮಾಡಲಿದ್ದಾರೆ. ಮಂಗಳವಾರ ಬೆಳಗ್ಗೆ 8.30ಕ್ಕೆ ಸುತ್ತೂರು ಶಾಖಾ ಮಠಕ್ಕೆ ತೆರಳಲಿದ್ದಾರೆ.
ಇದಾದ ಬಳಿಕ ಸಿಎಂ ಸಿದ್ದರಾಮಯ್ಯ ಚಾಮುಂಡಿಬೆಟ್ಟಕ್ಕೆ ತೆರಳಲಿದ್ದಾರೆ. ಅ.24 ಮಧ್ಯಾಹ್ನ 1.46ಕ್ಕೆ ನಂದಿ ಧ್ವಜಕ್ಕೆ ಪೂಜೆ ನೆರವೇರಿಸಲಿದ್ದಾರೆ. ಸಂಜೆ 4.40ಕ್ಕೆ ವಿಜಯದಶಮಿ ಮೆರವಣಿಗೆ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ. ರಾತ್ರಿ 7.30ಕ್ಕೆ ಪಂಜಿನ ಕವಾಯತು ವೀಕ್ಷಿಸಲಿದ್ದಾರೆ. ಅ.25ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಿಎಂ ಸಿದ್ದರಾಮಯ್ಯ ಅ.25ರಂದು ಸಂಜೆ ಮೈಸೂರಿನಿಂದ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ತಿಳಿದು ಬಂದಿದೆ.