ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಕಳೆಕಟ್ಟಿದ್ದು, ದಸರಾ ಗಜಪಡೆ ಪಯಣಕ್ಕೆ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಉಮೇಶ್ ಕತ್ತಿ ಚಾಲನೆ ನೀಡಿದ್ದಾರೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಹುಣಸೂರಿನ ವೀರನಹೊಸಳ್ಳಿಯಲ್ಲಿ ಗಜಪಡೆಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸುವ ಮೂಲಕ ಉಭಯ ಸಚಿವರು ಚಾಲನೆ ನೀಡಿದರು.
ಗಜಪೂಜೆ ನೆರವೇರಿಸುವ ವೇಳೆ ಅರಣ್ಯ ಸಚಿವ ಉಮೇಶ್ ಕತ್ತಿ ಯಡವಟ್ಟು ಮಾಡಿದ್ದು, ಶೂ ಧರಿಸಿಯೇ ಪೂಜೆ ನೆರವೇರಿಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಮೈಸೂರಿಗೆ ಪ್ರಯಾಣ ಬೆಳೆಸಲಿವೆ. ಈಬಾರಿ ದಸರಾ ಮಹೋತ್ಸವದಲ್ಲಿ ಒಟ್ಟು 14 ಆನೆಗಳು ಭಾಗವಹಿಸಲಿವೆ. ಈ ಬಾರಿ ಅದ್ದೂರಿ ದಸರಾ ಆಚರಣೆಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.