alex Certify ಮೈಸೂರು ದಸರಾ ಮಹೋತ್ಸವ: ಅಭಿಮನ್ಯು ನೇತೃತ್ವದಲ್ಲಿ ಮೊದಲ ಹಂತದ ಗಜಪಯಣಕ್ಕೆ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರು ದಸರಾ ಮಹೋತ್ಸವ: ಅಭಿಮನ್ಯು ನೇತೃತ್ವದಲ್ಲಿ ಮೊದಲ ಹಂತದ ಗಜಪಯಣಕ್ಕೆ ಚಾಲನೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇದೆ. ವಿಶ್ವವಿಖ್ಯಾತ ಜಂಭೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆಗಳ ಮೊದಲ ಹಂತದ ಗಜ ಪಯಣಕ್ಕೆ ಚಾಲನೆ ದೊರೆತಿದೆ. ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ಅಭಿಮನ್ಯು ನೇತೃತ್ವದ 9 ಗಜಪಡೆಗಳ ಗಯಪಯಣಕ್ಕೆ ಚಾಲನೆ ನೀಡಲಾಗಿದೆ.

ಮೈಸೂರು ಅರಮನೆ ಪುರೋಹಿತರು ಇಂದು ಬೆಳಿಗ್ಗೆ ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹಾಗೂ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸಾಂಪ್ರದಾಯಿಕವಾಗಿ ಗಯಪಯಣಕ್ಕೆ ಚಾಲನೆ ನೀಡಿದರು.

ಮೊದಲ ಹಂತದಲ್ಲಿ ಒಟ್ಟು ಒಂಭತ್ತು ಆನೆಗಳು ಗಜಪಯಣದ ಮೂಲಕ ಮೈಸೂರಿಗೆ ತೆರಳಿವೆ. ಅಭಿಮನ್ಯು ಆನೆ (58) ನೇತೃತ್ವದಲ್ಲಿ ಭೀಮ (24), ಗೋಪಿ (41), ಧನಂಜಯ (43), ಕಂಜನ್‌ (25), ರೋಹಿಣಿ (22), ಲಕ್ಷ್ಮೀ (53), ವರಲಕ್ಷ್ಮಿ (67), ಏಕಲವ್ಯ (38) ಆನೆಗಳು ಮೊದಲ ಗಜಪಯಣದಲ್ಲಿ ಮೈಸೂರಿಗೆ ತೆರಳಿದ್ದು, ವಿಶ್ವ ವಿಖ್ಯಾತ 414 ನೇ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ.

ಈ ಬಾರಿ ನಾಡ ಹಬ್ಬ ದಸರಾದಲ್ಲಿ ಒಟ್ಟು 14 ಆನೆಗಳು ಭಾಗವಹಿಸಲಿವೆ. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ. ಅಲ್ಲದೆ ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಆಯ್ಕೆ ಮಾಡಲಾಗಿದ್ದು, ಅಗತ್ಯವಿದ್ದರೆ ಮೀಸಲು ಆನೆಗಳನ್ನ ಬಳಸಿಕೊಳ್ಳಲು ಇಲಾಖೆ ತೀರ್ಮಾನಿಸಿದೆ. ಆಗಸ್ಟ್‌ 23 ರಂದು ಈ 9 ಆನೆಗಳನ್ನು ಅರಮನೆಗೆ ಬರಮಾಡಿಕೊಳ್ಳಲಾಗುವುದು. ಆಗಸ್ಟ್ 21 ರಿಂದ 23ರ ವರೆಗೆ 2 ದಿನಗಳ ಕಾಲ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ವಾಸ್ತವ್ಯ ಹೊಡಲಿವೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...