alex Certify BREAKING NEWS: ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ: 18 ಆನೆಗಳನ್ನು ಗುರುತಿಸಿದ ಅರಣ್ಯ ಇಲಾಖೆ; ಗಜಪಯಣಕ್ಕೆ ದಿನಾಂಕ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ: 18 ಆನೆಗಳನ್ನು ಗುರುತಿಸಿದ ಅರಣ್ಯ ಇಲಾಖೆ; ಗಜಪಯಣಕ್ಕೆ ದಿನಾಂಕ ನಿಗದಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಣ್ಯ ಇಲಾಖೆ ಸಿದ್ಧತೆ ನಡೆಸಿದ್ದು, ಈ ಬಾರಿ ದಸರಾಗಾಗಿ 18 ಆನೆಗಳನ್ನು ಗುರುತಿಸಿದೆ.

ಎರಡು ತಿಂಗಳ ಮುಂಚಿತವಾಗಿಯೇ ಆನೆಗಳು ಮೈಸೂರಿಗೆ ಆಗಮಿಸಲಿವೆ. ಆಗಸ್ಟ್ 21ರಂದು ಮೈಸೂರಿಗೆ ದಸರಾ ಆನೆಗಳ ಗಜಪಯಣ ಆರಂಭವಾಗಲಿದೆ. ನಾಲ್ಕು ಹೆಚ್ಚುವರಿ ಆನೆಗಳನ್ನು ಸಹ ಗುರುತಿಸಲಾಗಿದೆ. ಈ ಬಾರಿಯೂ ಅಭಿಮನ್ಯು ಆನೆಗೆ ಅಂಬಾರಿ ಹೊರುವ ಜವಾಬ್ದಾರಿ ನೀಡಲಾಗಿದೆ.

14 ಆನೆಗಳ ಪೈಕಿ ಮೊದಲ ಹಂತದಲ್ಲಿ 9 ಆನೆಗಳು ಮೈಸೂರಿಗೆ ಆಗಮಿಸಲಿವೆ. ಎರಡನೇ ಹಂತದಲ್ಲಿ 5 ಆನೆಗಳನ್ನು ಕರೆತರುವ ತಯಾರಿ ನಡೆದಿದೆ. ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು, ಭೀಮ, ಏಕಲವ್ಯ, ವರಲಕ್ಷ್ಮೀ, ಧನಂಜಯ, ಗೋಪಿ, ರೋಹಿತ, ಕಂಜನ್ ಆನೆಗಳು ಆಗಮಿಸಲಿವೆ. ಬಳಿಕ ಪ್ರಶಾಂತ, ಸುಗ್ರೀವ, ಮಹೇಂದ್ರ, ಲಕ್ಷ್ಮೀ, ಹಿರಣ್ಯ ಆನೆಗಳು ಆಗಮಿಸಲಿವೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...