ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ನಾದಬ್ರಹ್ಮ, ಸಂಗೀತ ನಿರ್ದೇಶಕ ಹಂಸಲೇಖ ನಾಡ ಅದಿದೇವತೆ ಚಾಮುಂಡೇಶ್ವರಿ ದೇವಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟನೆ ಮಾಡಿದರು.
ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 10-15ರಿಂದ 10:30ರ ಶುಭ ವೃಶ್ಚಿಕ ಲಗ್ನದಲ್ಲಿ ನಾದಬ್ರಹ್ಮ ಹಂಸಲೇಖ ದೀಪ ಬೆಳಗುವ ಮೂಲಕ ಚಾಮುಂಡಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ-2023ಕ್ಕೆ ಚಾಲನೆ ನೀಡಿದರು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಶಿವರಾಜ್ ತಂಗಡಗಿ, ಸಂಸದ ಪ್ರತಾಪ್ ಸಿಂಹ, ಶಾಸಕ ತನ್ವೀರ್ ಸೇಠ್ ಸೇರಿದಂತೆ ಗಣ್ಯಾತಿಗಣ್ಯರು ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮಾಡಿದರು.