ಮೈಸೂರು: ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಸಂಜೆ 4:40ರಿಂದ 5 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆಯಲಿದೆ.
ಜಂಬೂ ಸವಾರಿ ಮೆರವಣಿಗೆಗೂ ಮುನ್ನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ನೆರವೇರಿಸಿದರು. ಮಧ್ಯಾಹ್ನ 1;46ರಿಂದ 2:48ರವರೆಗಿನ ಶುಭ ಮಕರ ಲಗ್ನದಲ್ಲಿ ನಂದಿದ್ವಜಕ್ಕೆ ಪೂಜೆ ನೆರವೇರಿಸಲಾಯಿತು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಂಜೆ 4:40ರಿಂದ 5 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸುವ ಚಾಮುಂಡಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಲಾಗುತ್ತದೆ.