alex Certify BIG NEWS: ಮಹಿಷ ದಸರಾ ಕೈಬಿಡಲು ಒತ್ತಾಯ; ಬರಿಗಾಲಲ್ಲಿ ಬೆಟ್ಟ ಹತ್ತಿ ಮನವಿ ಮಾಡಿದ ಭಕ್ತರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಿಷ ದಸರಾ ಕೈಬಿಡಲು ಒತ್ತಾಯ; ಬರಿಗಾಲಲ್ಲಿ ಬೆಟ್ಟ ಹತ್ತಿ ಮನವಿ ಮಾಡಿದ ಭಕ್ತರು

 

ಅ.13 ರಂದು ಮಹಿಷ ದಸರಾ, ಆಹ್ವಾನ ಪತ್ರಿಕೆ ಬಿಡುಗಡೆ, ಚಾಮುಂಡಿಬೆಟ್ಟಕ್ಕೆ ಮಹಿಷ ಬೆಟ್ಟ  ಹೆಸರು - Mysore dasara oct 13 mahisha dasara invitation card released amid  opposition chamundi hill to be named ...ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆಗೆ ಅರಮನೆ ನಗರಿ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ ನಡೆದಿದೆ. ಈ ನಡುವೆ ವಿರೋಧದ ನಡುವೆಯೇ ಮಹಿಷ ದಸರಾ ಆಚಣೆ ಸಮಿತಿ ಮಹಿಷ ದಸರಾ ಆಚರಿಸಲು ತಯಾರಿ ನಡೆಸಿದೆ. ಅಕ್ಟೋಬರ್ 13ರಂದು ಮಹಿಷ ದಸರಾ ಆಚರಣೆ ನಡೆಸುವುದಾಗಿ ತಿಳಿಸಿದೆ. ಭಕ್ತರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ ಮಹಿಷ ದಸರಾ ಆಚರಿಸದಂತೆ ಒತ್ತಾಯಿಸಿದ್ದಾರೆ.

ಚಾಮುಂಡಿ ದೇವಿ ಭಕ್ತರು ಇಂದು ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಹಿಷ ದಸರಾ ಕೈಬಿಡುವಂತೆ ಮನವಿ ಮಾಡಿದ್ದಾರೆ.

ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಭಕ್ತರು, ಮಹಿಷ ದಸರಾ ಮಾಡುವವರಿಗೆ ಒಳ್ಳೆಯ ಬುದ್ಧಿಕೊಡು, ದುಷ್ಟರನ್ನು ಶಿಕ್ಷಿಸಿ, ಶಿಷ್ಟರನ್ನು ರಕ್ಷಿಸು ಎಂದು ಪ್ರಾರ್ಥನೆ ಸಲ್ಲಿಸಿದರು.

2015ರಲ್ಲಿ ಆರಂಭವಾದ ಮಹಿಷ ದಸರಾ ಆಚರಣೆಗೆ ಸುದೀರ್ಘ ಇತಿಹಾಸ ಸೃಷ್ಟಿಯಾಗಿದೆ. ಈ ಬಾರಿ 50ನೇ ವರ್ಷದ ಮಹಿಷ ದಸರಾ ಆಚರಣೆ ನಡೆಸಲಾಗುತ್ತಿದೆ ಎಂದು ಮಹಿಷ ದಸರಾ ಆಚರಣೆ ಸಮಿತಿಯಿಂದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್‌ 13ರಂದು ಮಹಿಷ ದಸರಾ ಆಚರಣೆ ಸಮಿತಿ ಹಾಗೂ ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ ಸಂಘ ಮಹಿಷ ದಸರಾ ಆಚರಿಸಲು ನಿರ್ಧರಿಸಿದೆ. ಈ ನಡುಇವೆ ಮಹಿಷ ದಸರಾ ಆಚರಣೆಗೆ ತಡೆ ನಿಡುವಂತೆ ಸ್ನೇಹಮಯಿ ಕೃಷ್ಣ ಎಂಬುವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಅ.11ರಂದು ಅರ್ಜಿ ವಿಚಾರಣೆಗೆ ಬರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...