BIG NEWS: ದಸರಾ ಮಹೋತ್ಸವ; ಮೈಸೂರಿನಲ್ಲಿ ಪೊಲೀಸ್ ಬಂದೋಬಸ್ತ್

ಮೈಸೂರು: ನಾಡ ಹಬ್ಬ, ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವ ಚಾಲನೆಗೆ ಕ್ಷಣಗಣನೆ ಆರಂಭವಾಗಿದೆ. ನಾದಬ್ರಹ್ಮ, ಸಂಗೀತ ನಿರ್ದೇಶಕ ಹಂಸಲೇಖ ಮೈಸೂರು ದಸರಾಗೆ ಕೆಲವೇ ಹೊತ್ತಲ್ಲಿ ಚಾಲನೆ ನಿಡಲಿದ್ದಾರೆ.

ಮೈಸೂರು ದಸರಾ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ದಸರಾ ಕಾರ್ಯಕ್ರಮ ನಡೆಯಲಿರುವ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಮೈಸೂರು ನಗರ, ಚಾಮುಂಡಿ ಬೆಟ್ಟ ಸೇರಿದಂತೆ ವಿವಿಧೆಡೆ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. 1 ಡಿಐಜಿ, 11ಎಸಿಪಿಗಳು, 20 ಎ ಎಸ್ ಪಿ ಸೇರಿದಂತೆ 4200 ಪೊಲಿಸರನ್ನು ನಿಯೋಜನೆ ಮಾಡಲಾಗಿದೆ. ಸಶಸ್ತ್ರಪಡೆಗಳು, ವಿಧ್ವಂಸಕ ಕೃತ್ಯ ತಡೆ ಪಡೆಗಳು, ಸ್ಫೋಟಕ ನಿಷ್ಕ್ರಿಯ ದಳ, ವಿಶೇಷ ಗರುಡ ಪಡೆ, 30 ಕೆ ಎಸಾರ್ ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಕಾನೂನು ಸುವ್ಯವಸ್ಥೆಗೆ ಯಾವುದೇ ತೊಂದರೆಯಾಗದಂತೆ ಕಟ್ಟೆಚ್ಚರ ವಹಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read