alex Certify BREAKING : ಮೈಸೂರು ದಸರಾ 2023 : ವಿಶ್ವವಿಖ್ಯಾತ ‘ಜಂಬೂಸವಾರಿ’ ಗೆ ಸಿಎಂ ಸಿದ್ದರಾಮಯ್ಯ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮೈಸೂರು ದಸರಾ 2023 : ವಿಶ್ವವಿಖ್ಯಾತ ‘ಜಂಬೂಸವಾರಿ’ ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಇದೀಗ ಚಾಲನೆ ನೀಡಿದ್ದಾರೆ.

ಹೌದು, ಇಂದು ಸಂಜೆ 4.40 ರಿಂದ 5 ಗಂಟೆಗೆ ಸಲ್ಲುವ ಶುಭ ಮೀನಾ ಲಘ್ನದಲ್ಲಿ ಜಂಬೂ ಸವಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅಂಬಾರಿ  ಉತ್ಸವಕ್ಕೆ ಚಾಲನೆ ನೀಡಿದ್ದಾರೆ.

ಸತತ 4ನೇ ಬಾರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಸಾಗುತ್ತಿದ್ದು, ಅರಮನೆಯಿಂದ ಬನ್ನಿಮಂಟಪದವರೆಗೆ ಈ ಮೆರವಣಿಗೆ ನಡೆಯಲಿದೆ. ಜಂಬೂಸವಾರಿಯಲ್ಲಿ 49 ಸ್ತಬ್ದಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿದ್ದು, ಲಕ್ಷಾಂತರ ಜನರು ದಸರಾ ಜಂಬೂಸವಾರಿಗೆ ಸಾಕ್ಷಿಯಾಗಲಿದ್ದಾರೆ.
ಅರಮನೆಯಿಂದ ಹೊಡಲಿರುವ ಜಂಬೂ ಸವಾರಿ, ಕೆ.ಆರ್.ಸರ್ಕಲ್ , ಆರ್ಯವೇದ ಸರ್ಕಲ್, ತಿಲಕ್ ನಗರ, ಬಂಬೂ ಬಜಾರ್ ಮೂಲಕ ಬನ್ನಿ ಮಂಟಪ್ಪಕ್ಕೆ ತಲುಪಲಿದೆ. 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತಿರುವ ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ, ವಿಜಯಾ ಸಾಥ್ ನೀಡಿದೆ. ಈ ವೇಳೆ ಜಂಬೂಸವಾರಿಯಲ್ಲಿ 49 ಸ್ತಬ್ಧಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...