ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಂಜೆ 4 ಗಂಟೆಗೆ ಮಹತ್ವದ ಸಭೆ ನಿಗದಿಯಾಗಿದೆ.
ದಸರಾ ಪ್ರಮುಖ ಆಕರ್ಷಣೆಯಾದ ಗಜಪಡೆಯನ್ನು ಮೈಸೂರಿಗೆ ಕರೆತರಲು ಸಿದ್ದತೆ ನಡೆದಿದ್ದು. ಆಗಸ್ಟ್ 21 ರಂದು ಗಜಪಯಣ ನಡೆಸಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ಇಂದು ಸಿಎಂ ನೇತೃತ್ವದಲ್ಲಿ ಇಂದು ಸಭೆ ನಡೆಯಲಿದೆ.
ಈ ಬಾರಿ ಅದ್ದೂರಿ ‘ಮೈಸೂರು ದಸರಾ’ ಮಹೋತ್ಸವ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ.ಕಳೆದ ಬಾರಿ ಕೋವಿಡ್ ಹಿನ್ನೆಲೆ ರಾಜ್ಯದ ಜನರು ಸಂಕಷ್ಟಕ್ಕೆ ಒಳಗಾಗಿದ್ದರು. ಅದ್ದೂರಿಯಾಗಿ ಮೈಸೂರು ದಸರಾ ನಡೆದಿರಲಿಲ್ಲ . ಈ ಬಾರಿ ಅದ್ದೂರಿಯಾಗಿ ‘ಮೈಸೂರು ದಸರಾ’ ನಡೆಸಲು ಪ್ಲ್ಯಾನ್ ಮಾಡಲಾಗಿದೆ. ದಸರಾ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ ಎಂದರು.
ಪ್ರಸಕ್ತ ಸಾಲಿನ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅ.15 ರಿಂದ 24 ರವರೆಗೆ ದಸರಾ ಮಹೋತ್ಸವ ನಡೆಯಲಿದೆ.ಅಕ್ಟೋಬರ್ 15 ರಂದು ದಸರಾ ಉದ್ಘಾಟನೆಗೊಳ್ಳಲಿದ್ದು, ಅಕ್ಟೋಬರ್ 24 ರಂದು ಐತಿಹಾಸಿಕ ಜಂಬೂಸವಾರಿ ಮೆರವಣಿಗೆ ನಡೆಯಲಿದೆ ಎಂದು ಹೇಳಲಾಗಿದೆ.