ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಅರಮನೆ ಆವರಣದಲ್ಲಿ ಜಂಬೂ ಸವಾರಿಗೆ ಸಕಲ ಸಿದ್ಧತೆಗಳು ನಡೆದಿವೆ. ಜಂಬೂ ಸವಾರಿ ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದ ಲಕ್ಷಾಂತರ ಜನರು ಆಗಮಿಸಿದ್ದಾರೆ.
ಜಂಬೂ ಸವಾರಿ ವೀಕ್ಷಿಸಲು ಜಂಬೂ ಸವಾರಿ ಸಾಗುವ ರಸ್ತೆಯ ಇಕ್ಕೆಲಗಳಲ್ಲಿ ಲಕ್ಷಾಂತರ ಜನರು ಜಮಾವಣೆಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಮೆರವಣಿಗೆ ಸಾಗುವ ಸ್ಥಳಗಳಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಪ್ರತಿ ಬಾರಿಯಂತೆ ಈ ಬಾರಿಯೂ ಜಂಬೂ ಸವಾರಿಯಲ್ಲಿ 14 ಆನೆಗಳು ಪಾಲ್ಗೊಳ್ಳಲಿವೆ. ಮೆರವಣಿಗೆಯಲ್ಲಿ ಹೆಜ್ಜೆ ಹಾಕುವ ಆನೆಗಳ ಪಟ್ಟಿ ಬಿಡುಗಡೆಯಾಗಿದೆ. ಅಭಿಮನ್ಯು, ವಿಜಯ, ವರಲಕ್ಷ್ಮೀ, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಗೋಪಿ, ಪ್ರಶಾಂತ್, ಸುಗ್ರೀವ, ಕಂಜನ್, ರೋಹಿತ್, ಲಕ್ಷ್ಮೀ ಹಾಗೂ ಹಿರಣ್ಯ ಆನೆಗಳು ಜಂಬೂ ಸವಾರಿಯಲ್ಲಿ ಭಾಗವಹಿಸಲಿವೆ. ಅಭಿಮನ್ಯು ಆನೆ 750 ಕೆಜಿ ಚಿನ್ನದ ಅಂಬಾರಿಯನ್ನು ಹೊತ್ತು ಮೆರವಣಿಯಲ್ಲಿ ಸಾಗಲಿದೆ.