
ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ವಸ್ತು ಪ್ರದರ್ಶನದ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ನಟ ಡಾಲಿ ಧನಂಜಯ್ ಅವರ ಮದುವೆಗೆ ಹಾಕಲಾಗಿದ್ದ ಸೆಟ್ ಪಕ್ಕದಲ್ಲಿಯೇ ಬೆಂಕಿ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸಲು ಕಾರ್ಯಾಚಾರಣೆ ನಡೆಸಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಿನ್ನೆ ಭಾರಿ ಅಗ್ನಿ ಅವಘಡ ಸಂಭವಿಸಿತ್ತು. ಸುಮಾರು 200 ಎಕರೆ ಅರಣ್ಯ ಪ್ರದೇಶ ಸಂಪೂರ್ಣ ಬೆಂಕಿಗಾಹುತಿಯಾಗಿತ್ತು. ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಿಯಂತ್ರಿಸಿದ್ದಾರೆ. ಇದರ ಬೆನ್ನಲ್ಲೇ ವಸ್ತು ಪ್ರದರ್ಶನದ ಆವರಣದಲ್ಲಿ ಬೆಂಕಿ ಅವಘಡ ಸಂಭವಿಸಿದೆ.